ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ.

ಸದ್ಯ ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ಮಾಹಿತಿ ಲಭ್ಯವಾಗಿದೆ.
ಹಳೇ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಿದ್ದಾರೆ ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.



