Breaking
22 Mar 2026, Sun

ಪಂಚಿನಡ್ಕದಲ್ಲಿ ಕಾರು ಪಲ್ಟಿ: ಅದೃಷ್ಟವಶಾತ್ ಚಾಲಕ ಪಾರು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಬಂಟ್ವಾಳದ ಪಂಚಿನಡ್ಕದಲ್ಲಿ ಜುಲೈ 01 ರಂದು ನಡೆದಿದೆ.

ಬೆಳಗ್ಗಿನ ಜಾವ ಪುಣಚ ಮೂಲದ ವ್ಯಕ್ತಿ ಬಂಟ್ವಾಳ ಮೂಲಕ ಮನೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಪಲ್ಟಿಯಾಗಿ ಕೆಳಗೆ ಬಿದ್ದಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು.

ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *