ಬಂಟ್ವಾಳ: ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ 2011ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 8 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಧರ್ಮಸ್ಥಳದಲ್ಲಿ ಜೂ. 30 ರ ಸೋಮವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ಅಕ್ಬರ್ ಸಿದ್ದಿಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




