Breaking
15 Jul 2026, Wed

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಮಂಗಳೂರು: ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಜೂನ್ 29 ರ ತಡರಾತ್ರಿ ನಡೆದಿದೆ.

ಕೊಳಂಬೆ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಟೂರಿಸ್ಟ್‌ ಕಾರು ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ವೇಳೆ ನಾಯಿ ಅಡ್ಡಬಂದಿದೆ. ನಾಯಿ ಅಡ್ಡ ಬಂದ ತಕ್ಷಣ ಚಾಲಕನ ನಿಯಂತ್ರಣ ತಪ್ಪಿ, ಕಾರು ನೇರವಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದೆ.

ಅಪಘಾತದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *