Breaking
19 Sep 2026, Sat

ಹೆಜಮಾಡಿ ಟೋಲ್ ಬಳಿ ನಿಲ್ಲಿಸಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿ: ಇಬ್ಬರಿಗೆ ಗಾಯ

ಉಡುಪಿ: ತಾಲ್ಲೂಕಿನ ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಜುಲೈ.1 ರಂದು ಬೆಳಗ್ಗೆ ನಡೆದಿದೆ.

ಗಾಯಗೊಂಡಿರುವವರು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ ನಿವಾಸಿ ವಿರಾಜ್(29) ಎಂದು ಗುರುತಿಸಲಾಗಿದೆ.

ಒಂದು ಕಾರ್ಯಕ್ರಮ ಮುಗಿಸಿಕೊಂಡು ಮುಂಜಾವಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಾರು ಚಾಲಕ ಹೆಜಮಾಡಿಯ ಟೋಲ್ ಗೇಟಿನ ಬಳಿ ಮರದ ದಿಮ್ಮಿಗಳನ್ನು ಹೇರಿಕೊಂಡು ನಿಲ್ಲಿಸಿದ್ದ ಲಾರಿಯನ್ನು ಗಮನಿಸದೇ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಸಿಲುಕಿಕೊಂಡಿದ್ದ ವಿರಾಜ್ ರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಟೋಲ್ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ಶ್ರಮಿಸಿದ್ದಾರೆ.

ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *