Breaking
26 Jul 2025, Sat

ದೇಶಮಟ್ಟದಲ್ಲಿ ಎನ್ ಡಿ ಆರ್ ಎಫ್ ತಂಡದ ರೀತಿ ಗ್ರಾಮಮಟ್ಟದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಪ್ರಾಮುಖ್ಯತೆ ಪಡೆದಿದೆ : ಕಮಾಂಡರ್ ಶಾಂತಿಲಾಲ್ ಜಟಿಯಾ

ವಿಟ್ಲ : ಕರ್ನಾಟಕದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್ ಕೆ ಡಿ ಆರ್ ಡಿ ಪಿ ಯ 10460 ಮಂದಿ ಶೌರ್ಯ ಸ್ವಯಂಸೇವಕರು ಎನ್ ಡಿ ಆರ್ ಎಫ್ ತಂಡದ ಕಾರ್ಯದಲ್ಲಿ ಬೆಂಬಲವನ್ನು ನೀಡುತ್ತಿದ್ದು , ದೇಶಮಟ್ಟದಲ್ಲಿ ಎನ್ ಡಿ ಆರ್ ಎಫ್ ತಂಡದ ರೀತಿ ಗ್ರಾಮಮಟ್ಟದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಮಾಡುವಂತ ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆ ಅಭಿನಂದನದಾಯಕವಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯಾ ಹೇಳಿದರು.

ಅವರು ಮಂಗಳವಾರ ವಿಟ್ಲ ಬ್ರಹ್ಮಶ್ರೀ ಸಮುದಾಯ ಭವನದಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ) ವಿಟ್ಲ ಇದರ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು.

ನಮ್ಮ ದೇಶದ ಯಾವುದೇ ಭಾಗದಲ್ಲಿ ಯಾವುದೇ ನೈಸರ್ಗಿಕ ವಿಪತ್ತು ಅಥವಾ ಇನ್ಯಾವುದೇ ಅವಘಡಗಳು ಸಂಭವಿಸಿದಾಗ ಎನ್ ಡಿ ಆರ್ ಎಫ್ ತಂಡವು ದೇಶದ ರಕ್ಷಣೆಗೆ ಸದಾ ಸಿದ್ಧವಾಗಿರುತ್ತದೆ, ವಿದೇಶದಲ್ಲಿ ಯುದ್ಧ ಅಥವಾ ಇನ್ನಾವುದೇ ಪರಿಸ್ಥಿತಿಯಲ್ಲಿ ನಮ್ಮ ದೇಶದ ಜನರು ಅಪಾಯದ ಪರಿಸ್ಥಿತಿಯನ್ನು ಎದುರಿಸುವ ಸಂದರ್ಭದಲ್ಲಿಯೂ ನಾವು ಸದಾ ಅವರಿಗೆ ರಕ್ಷಣೆಯಾಗಿ ನಿಲ್ಲುತ್ತೇವೆ ಎಂದರು.

ಕಾರ್ಯಗಾರವನ್ನು ವಿಟ್ಲ ಆರಕ್ಷಕ ಠಾಣೆಯ ಉಪ ನಿರೀಕ್ಷಕರಾದ ರತ್ನಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಪ್ರಾರಂಭಕ್ಕೆ ಮೊದಲು ನಿನ್ನೆ ರಸ್ತೆ ಅಪಘಾತಕ್ಕೆ ಬಲಿಯಾದ ಯೋಜನೆಯ ಕೃಷಿ ಅಧಿಕಾರಿ ಚಿದಾನಂದ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿ ಶ್ರೀ ಕ್ಷೇತ್ರದ ಮೂಲಕ ಸಮಾಜ ಸೇವೆ ಮಾಡಲು ಉತ್ತಮ ಅವಕಾಶ ಲಭಿಸಿದ್ದು ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಿ ಎಂದರು.

ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ಫಾಯ್ಸ್ ಶೌರ್ಯ ತಂಡದ ಸದಸ್ಯರ ಜವಾಬ್ದಾರಿ ಕರ್ತವ್ಯ ಬಗ್ಗೆ ಮಾಹಿತಿ, ರೂಪರೇಷೆಗಳನ್ನು ನೀಡಿದರು.

ವೇದಿಕೆಯಲ್ಲಿ ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟೆಗಾರ, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಎನ್ ಡಿ ಆರ್ ಎಫ್ ಕಾನ್ಸ್ಟೇಬಲ್ ವಿನೋದ್, ಶೌರ್ಯ ಘಟಕ ವಿಟ್ಲದ ಕ್ಯಾಪ್ಟನ್ ಸುರೇಶ್, ಮೊದಲಾದವರು ಉಪಸ್ಥಿತರಿದ್ದರು.

ವಿಟ್ಲ ಯೋಜನಾ ಕಚೇರಿಯ ಸಿಬ್ಬಂದಿಗಳು ಪ್ರಾರ್ಥಿಸಿ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಸ್ವಾಗತಿಸಿ, ವಿಟ್ಲ ವಲಯ ಮೇಲ್ವಿಚಾರಕ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು.

ಜನಜಾಗೃತಿ ಮೇಲ್ವಿಚಾರಕರಾದ ನಿತೇಶ್ ಕೆ, ಏನ್ ಡಿ ಆರ್ ಎಫ್ ಸಿಬ್ಬಂದಿಗಳಾದ ವಿನೋದ್ ಅಗೇರ, ಸಂಜು ಕುಮಾರ್ , ರಾಮ್ ಪ್ರಸಾದ್ , ಬಾಲಕೃಷ್ಣ ಸಹಕರಿಸಿದರು.

Leave a Reply

Your email address will not be published. Required fields are marked *