Breaking
21 Mar 2026, Sat

ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ಜುಲೈ 7ರ೦ದು ಪ್ರತಿಭಟನೆಗೆ ಕರೆ

ಬೆಂಗಳೂರು: ರಾಜ್ಯ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮಗಳನ್ನು ಖಂಡಿಸಿ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಹಿಂಜಾವೆ ಯು “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ ಇದಕ್ಕೆ ಪುಷ್ಟಿ ನೀಡುವಂತೆ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಚಾಲಕರಾದ ಶೀ ಸಮಿತ್ ರಾಜ್ ಧರೆಗುಡ್ಡೆಯವರ ಮೇಲೆ ಸುಳ್ಳು ಮೊಕದ್ದಮ್ಮೆಯನ್ನು ದಾಖಲಿಸಿ ಬಂಧಿಸಿರುತ್ತಾರೆ.

ಇದೇ ರೀತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಅನ್ನು ದಾಖಲಿಸಿ ಅವರಿಗಿೆ ನೋಟಿಸು ನೀಡದೆ ಬಂಧಿಸುವ ಪ್ರಯತ್ನಗಳು ನಡೆಯುತ್ತಿದೆ.

ಕಾನೂನಿಗೆ ವಿರುದ್ಧವಾಗಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಕರ್ನಾಟಕದ ರಾಜ್ಯ ಕಾಂಗ್ರೆಸ್ ಸರಕಾರವು ವಾಕ್ಸ್ವಾತಂತ್ರವನ್ನು ಧಾರ್ಮಿಕ ಸ್ವಾತಂತ್ರವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಈ ದೇಶದಲ್ಲಿ ಸಂವಿಧಾನಿಕವಾಗಿ ಪ್ರತಿಯೊಬ್ಬ ಪ್ರಜೆಗೂ ತನ್ನದೇ ಆದ ಸ್ವಾತಂತ್ರೈವಾದ ಹಕ್ಕನ್ನು ನೀಡಿದೆ . ಆದರೆ ಇದೆಲ್ಲದನ್ನು ಧಮನಿಸುವ ಕೆಲಸಕ್ಕೆ ಸರಕಾರವು ಕೈಹಾಕಿದೆ ಆದುದರಿಂದ ರಾಜ್ಯದ ಹಿಂದು ವಿರೋಧಿ ಸರ್ಕಾರದ ನಿಲುವನ್ನು ಖಂಡಿಸಿಜುಲೈ 7ರ೦ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡಬಿದ್ರೆ,ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರದಲ್ಲೆ ಏಕಕಾಲದಲ್ಲಿ ಸಂಚಿ 4ಗಂಟೆಗೆ ಪ್ರತಿಭಟನಾ ಸಭೆಗಳನ್ನು ಸಂಘಟಿಸಲು ಸಂಘಟನೆಯು ನಿರ್ಧರಿಸಿದೆ ಎಂದು ತನ್ನ ಪ್ರಕಟಣೆ ಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *