Breaking
20 Jun 2026, Sat

ಖಾಸಗಿ ಬಸ್‌ಗಳೆರಡು ಮುಖಾಮುಖಿ ಡಿಕ್ಕಿ: ವಿದ್ಯಾರ್ಥಿಗಳು ಸಹಿತ ಪ್ರಯಾಣಿಕರಿಗೆ ಗಾಯ

ಸುರತ್ಕಲ್: ಖಾಸಗಿ ಬಸ್‌ಗಳೆರಡು ಮುಖಾಮುಖಿ ಢಿಕ್ಕಿಯಾಗಿ ವಿದ್ಯಾರ್ಥಿಗಳು ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಚೇಳ್ಯಾರು ಮಧ್ಯ ಮಾಧವನಗರದ ವಸತಿ ಶಾಲೆಯ ಮುಂಭಾಗದಲ್ಲಿ ಜುಲೈ 2 ರಂದು ನಡೆದಿದೆ.

ಚೇಳ್ಯಾರಿನಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಬಸ್‌ನ ಸ್ಟೇರಿಂಗ್ ಜಾಮ್ ಅಗಿ ಸುರತ್ಕಲ್‌ನಿಂದ ಚೇಳ್ಯಾರಿಗೆ ಬರುತ್ತಿದ್ದ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಥಳೀಯ ಸರಕಾರಿ ಪ್ರೌಢಶಾಲೆ, ಶ್ರೀನಿವಾಸ್‌ ಕಾಲೇಜಿನ ವಿದ್ಯಾರ್ಥಿಗಳು, ನಾಲ್ವರು ಶಿಕ್ಷಕರು ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ಗೋವಿಂದ ಮಡಿವಾಳ, ಸಂಚಾರ ವಿಭಾಗದ ಡಿಸಿಪಿ ರವಿಶಂಕ‌ರ್, ಮಂಗಳೂರು ಉತ್ತರ ವಲಯ ಬಿಇಒ ಜೇಮ್ಸ್ ಕುಟ್ಟಿನೊ, ಚೇಳ್ಯಾರು ಗ್ರಾ.ಪಂ. ಅಧ್ಯಕ್ಷ ಜಯಾನಂದ, ಉಪಾಧ್ಯಕ್ಷೆ ರೇಖಾ, ಪಿಡಿಒ ನಿತ್ಯಾನಂದ, ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಸದಸ್ಯರಾದ ಶೆಟ್ಟಿ, ಕಾಂಗ್ರೆಸ್ ಮುಖಂಡ ಕಿರಣ್ ಶೆಟ್ಟಿ ಕೆರೆಮನೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

ವೈದ್ಯರಲ್ಲಿ ಮಾತನಾಡಿದ ಶಾಸಕರು ಗಾಯಾಳುಗಳೆಲ್ಲರ ಚಿಕಿತ್ಸೆಯ ವೆಚ್ಚವನ್ನು ಆಸ್ಪತ್ರೆಯವರು ಮತ್ತು ಬಸ್ ಮಾಲಕರು ಭರಿಸಿ ಚಿಕಿತ್ಸೆಗೆ ಸ್ಪಂದಿಸಬೇಕು ಎಂದು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *