ಮಂಗಳೂರು: ಭಾರೀ ಗಾಳಿ ಮಳೆಗೆ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಘಟನೆ ಮಂಗಳೂರಿನ ನವಭಾರತ್ ವೃತ್ತದ ಬಳಿ ನಡೆದಿದೆ.

ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆಯನ್ನು ನಡೆಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಈ ವೇಳೆ ಸ್ಥಳದಲ್ಲಿ ಜನಪ್ರತಿನಿಧಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

