Breaking
13 May 2026, Wed

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ಹೆದ್ದಾರಿಯ ಬಿಳಿನೆಲೆ ಕೈಕಂಬ ಸಮೀಪದ ಪಲ್ಲಿಗದ್ದೆಯಲ್ಲಿ ಜುಲೈ 2 ರಂದು ನಡೆದಿದೆ.

ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ರಭಸಕ್ಕೆ ಸಂಪೂರ್ಣ ವಾಗಿ ಜಖಂಗೊಂಡಿದೆ.

ಕಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರಿದ್ದು, ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *