Breaking
19 Sep 2026, Sat

ಮಣಿಪಾಲದ ಎಂಐಟಿ ಕಾಲೇಜು ಬಳಿ ಬಸ್ ಡಿಕ್ಕಿ – ಮಹಿಳೆ ಸಾವು

ಉಡುಪಿ: ಬಸ್ಸೊಂದು ಮಹಿಳೆಗೆ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಮೃತರನ್ನು ವಿನೋದಾ (65) ಎಂದು ಗುರುತಿಸಲಾಗಿದೆ.

ವಿನೋದ ಅವರು ತನ್ನ ಮೊಮ್ಮಕ್ಕಳನ್ನು ಮನೆಗೆ ಬಿಟ್ಟು ರಸ್ತೆ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಉಡುಪಿಯಿಂದ ಧರ್ಮಸ್ಧಳದ ಯಾತ್ರಾ ಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದ ಬಸ್, ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಬಸ್ಸಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *