ಪುತ್ತೂರು : ಆರೋಪಿ ಕೃಷ್ಣ ರಾವ್‌ನನ್ನು ಬಂಧಿಸಿ: ಗರ್ಭಪಾತಕ್ಕೆ ಒತ್ತಾಯಿಸಿದವರನ್ನು ತನಿಖೆಗೆ ಒಳಪಡಿಸಿ – ಮಹಿಳಾ ಸಂಘಟನೆ

ಪುತ್ತೂರು : ಯುವತಿಯನ್ನು ಗರ್ಭಾವತಿಯನ್ನಾಗಿಸಿ ಬಳಿಕ ವಂಚಿಸಿರುವ ಪ್ರಕರಣ ಸಂಬಂಧ ವಂಚನೆಗೊಳಗಾಗಿರುವ ವಿದ್ಯಾರ್ಥಿನಿಯ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿದ್ದಾರೆ.

ಯುವತಿಗೆ ನ್ಯಾಯ ಒದಗಿಸದಿದ್ದಲ್ಲಿ ಜಿಲ್ಲೆಯ ಜನಪರ ಮಹಿಳಾ ಸಂಘಟನೆಗಳನ್ನು ಜೊತೆ ಸೇರಿಸಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಿಯೋಗ ಎಚ್ಚರಿಕೆ ನೀಡಿದೆ.

ಮದುವೆಯಾಗುವ ಭರವಸೆ ನೀಡಿ, ದೈಹಿಕ ಸಂಪರ್ಕ ಬೆಳೆಸಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಬಳಿಕ ರಾಜಕೀಯ ಬೆಂಬಲದಿಂದ ತಲೆ ಮರೆಸಿಕೊಂಡಿರುವ ಆರೋಪಿ ಕೃಷ್ಣ ರಾವ್‌ನನ್ನು ತಕ್ಷಣ ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ.

ಈ ಸಂದರ್ಭ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ, ಮಾಜಿ ಕಾರ್ಪೊರೇಟ‌ರ್ ಜಯಂತಿ ಶೆಟ್ಟಿ, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ವಿದ್ಯಾ ಶೆಣೈ, ದಲಿತ ಹಕ್ಕುಗಳ ಸಮಿತಿಯ ಈಶ್ವರಿ ಪದ್ಮುಂಜ, ನ್ಯಾಯವಾದಿ ಶೈಲಜಾ ಅಮರನಾಥ್, ಜನವಾದಿ ಮಹಿಳಾ ಸಂಘಟನೆಯ ಪ್ರಮೀಳಾ ಕಾವೂರು, ಅಸುಂತಾ ಡಿ ಸೋಜಾ, ಪ್ರಮೀಳಾ ದೇವಾಡಿಗ, ಪ್ಲೇವಿ ಕ್ರಾಸ್ತಾ ಜೊತೆಗಿದ್ದರು.

Leave a Reply

Your email address will not be published. Required fields are marked *