ಪ್ರಧಾನಿ ಮೋದಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ ಪ್ರಧಾನ

ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು.

ಪ್ರಶಸ್ತಿಯನ್ನು ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಜುಲೈ 9 ರವರೆಗೆ ಪ್ರಧಾನಿ ಮೋದಿ ಘಾನಾ, ಟ್ರಿನಿಡಾಡ್, ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಭೇಟಿ ನೀಡಲಿದ್ದಾರೆ.

Leave a Reply

Your email address will not be published. Required fields are marked *