Breaking
13 May 2026, Wed

ಬಂಟ್ವಾಳದಲ್ಲಿ ನಿರಂತರ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬಂಟ್ವಾಳ: ಕಳೆದ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಇಂದು (ಜು.4) ರಜೆ ಘೋಷಣೆ ಮಾಡಲಾಗಿದೆ.

ತಹಶೀಲ್ದಾರ್ ಆದೇಶದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಕಾರಣ ಸಾರ್ವಜನಿಕರು ಕೂಡಾ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

Leave a Reply

Your email address will not be published. Required fields are marked *