Breaking
19 Sep 2026, Sat

ಉಳ್ಳಾಲದಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಉಳ್ಳಾಲ: ನಾಪತ್ತೆಯಾದ ಬೀರಿ‌ ನಿವಾಸಿ ಯುವಕನ ಮೃತದೇಹ ಉಚ್ಚಿಲ ರೈಲ್ವೇ ಗೇಟ್ ಬಳಿ ಪತ್ತೆಯಾದ ಘಟನೆ ಜೂನ್ 4 ರಂದು ಬೆಳಕಿಗೆ ಬಂದಿದೆ.

ಮೃತಪಟ್ಟ ಯುವಕ ಕೋಟೆಕಾರು ಬೀರಿ ನಿವಾಸಿ, ಮೋಹನ್ ದಾಸ್ ಪುತ್ರ ತೇಜಸ್(25) ಎಂದು ಗುರುತಿಸಲಾಗಿದೆ.

ಜುಲೈ 2ರ ರಾತ್ರಿ ಮಲಗುವ ಕೋಣೆಯಿಂದ ನಾಪತ್ತೆಯಾಗಿದ್ದ ತೇಜಸ್ ಕುರಿತು ತಂದೆ ಉಳ್ಳಾಲ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದರು.

ತೇಜಸ್ ಮಣಿಪಾಲ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ರೈಲ್ವೇ ಹಳಿಯಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಈ ಕುರಿತು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *