Breaking
19 Sep 2026, Sat

ಉಪ್ಪಿನಂಗಡಿಯಲ್ಲಿ ಲಾರಿ ಹಾಗೂ ಬಸ್ ನಡುವೆ ಅಪಘಾತ: ಪ್ರಯಾಣಿಕರು ಅಪಾಯದಿಂದ ಪಾರು

ಉಪ್ಪಿನಂಗಡಿ: ಸಮೀಪದ ನೆಕ್ಕಿಲಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಗಂಭೀರವಾಗಿ ಜಖಂಗೊಂಡಿವೆ.

ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *