Breaking
13 May 2026, Wed

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಪುತ್ತೂರಿನ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗು ಜಿಲ್ಲೆಯ ಅಬ್ದುಲ್ ರೆಹಮಾನ್ ಕಲ್ಕಂದೂರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ರೆಹಮಾನ್ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯದರ್ಶಿಯಾಗಿದ್ದು ದೋಹಾದಲ್ಲಿ ಅಡಗಿದ್ದ. ಈತನ ವಿರುದ್ಧ ಲುಕ್ ಔಟ್ ನೋಟಿಸ್ ಕೂಡ ಜಾರಿಯಾಗಿತ್ತು. ಅಲ್ಲದೆ ಈತನ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನೂ ಘೋಷಿಸಲಾಗಿತ್ತು. ಸದ್ಯ ಈತ ಕೇರಳದ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ವಶವಾಗಿದ್ದಾನೆ.

ಅಧಿಕಾರಿಗಳು ಆರೋಪಿ ಅಬ್ದುಲ್ ರೆಹಮಾನ್ ನನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಮತ್ತೆ ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

Leave a Reply

Your email address will not be published. Required fields are marked *