ಬಂಟ್ವಾಳ: ಕಾರು,ಲಾರಿ ನಡುವೆ ಅಪಘಾತ- ಚಾಲಕ ಸಾವು

ಬಂಟ್ವಾಳ: ಕಾರು-ಲಾರಿ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ತುಂಬೆಯಲ್ಲಿ ಜು. 5 ರ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಪಾವೂರು ನಿವಾಸಿ ನೌಫಾಲ್ ಎಂದು ಗುರುತಿಸಲಾಗಿದೆ.

ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಬಳಿಕ ಮಂಗಳೂರು ಕಡೆಯಿಂದ ಬರುವ ರಸ್ತೆ ಮೇಲೆ ಬಿದ್ದಿದೆ. ಈ ವೇಳೆ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ, ಕಾರಿಗೆ ಡಿಕ್ಕಿಯಾಗಿದ್ದು ,ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *