ಮಂಗಳೂರು: ಮಾದಕ ವಸ್ತು ಪೂರೈಕೆಯ ಸಂಪರ್ಕ ಹೊಂದಿದ್ದ ಹಾಸನದ ಯುವಕನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂದು ಗುರುತಿಸಲಾಗಿದೆ.

ಮಂಗಳೂರು ಸೆನ್ ಠಾಣೆಯಲ್ಲಿ ಜುಲೈ 2 ರಂದು ಐದು ಮಂದಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪೊಲೀಸರು ತನಿಖೆ ಮುಂದುವರೆಸಿದ ಸಂದರ್ಭದಲ್ಲಿ, ಈ ಆರೋಪಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ವ್ಯಕ್ತಿ ಧ್ರುವ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ಮೊಬೈಲ್, ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.


