Breaking
19 Sep 2026, Sat

ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆಯನ್ನು ಉತ್ಸವ ಸಮಿತಿಯ ಸಂಚಾಲಕರಾದ ಅರುಣ್ ಕುಮಾರ್ ರೈ ಆನಾಜೆಯವರು ಬಿಡುಗಡೆಗೊಳಿಸಿದರು. ಈ

ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ಹಿಂದು ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಯಂತ್ ಕುಂಜೂರು ಪಂಜ, ಗಣೇಶ್ ಕಾಮತ್, ಕೇಶವ ಪ್ರಸಾದ್ ಬಿ.ವಿ., ದಾಮೋದರ ಪಾಟಾಳಿ, ಜಿತೇಶ್ ಬಲ್ನಾಡು , ಜಯಂತ್ ಶೆಟ್ಟಿ ಕಂಬಳತ್ತಡ್ಡ, ಮತ್ತತ್ತಿರರು ಉಪಸ್ಥಿತ್ತರಿದ್ದರು.

Leave a Reply

Your email address will not be published. Required fields are marked *