Breaking
25 Sep 2026, Fri

ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡದಲ್ಲಿ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ

ಬಂಟ್ವಾಳ : ಸರಕಾರಿ ಪದವಿ ಪೂರ್ವ ಕಾಲೇಜು ಸಜಿಪಮೂಡದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಭವ್ಯವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಜೀಪ ಮಾಗಣೆ ತಂತ್ರಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಎಂ. ಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸಿ ಶ್ರೇಷ್ಠ ಶಿಕ್ಷಣ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಎಸ್. ಜೈರಾಭಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಯಲು ಅಗತ್ಯವಾದ ಎಲ್ಲ ರೀತಿಯ ಸಹಕಾರ ಒದಗಿಸಲು ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಸದಸ್ಯ ಶ್ರೀ ವಿಶ್ವನಾಥ ಕೊಟ್ಟಾರಿ, ನಿಕಟ ಪೂರ್ವ ಪ್ರಭಾರ ಪ್ರಾಂಶುಪಾಲರು ಸುರೇಶ ಕುಮಾರ್ ಐತಾಳ್ ಶುಭ ಹಾರೈಸಿ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕುಮಾರಿ ಸ್ಪೂರ್ತಿ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಣೆ ಶ್ರೀಮತಿ ಗಾಯತ್ರಿ ನಿರ್ವಹಿಸಿದರು ಹಾಗೂ ಸನ್ಮಾನಿತ ವಿದ್ಯಾರ್ಥಿಗಳ ಪರಿಚಯವನ್ನು ಶ್ರೀಮತಿ ಭಾರತಿ ನೀಡಿದರು.

ಕಳೆದ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿಯರಾದ ಕುಮಾರಿ ಅಸ್ಪಿಯಾ ಮತ್ತು ಆಯಿಷತ್ ಮುಬಿನಾ ಬಾನು ಅವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಹಿರಿಯ ಉಪನ್ಯಾಸಕರಾದ ಬಾಲಕೃಷ್ಣ ನಾಯ್ಕ್ ಕೆ., ಬೆಳ್ಳಾರೆ, ಶೋಭಾ, ಸಿಂಧೂಜ, ವೇದಾವತಿ, ಗುಮಾಸ್ತೆ ಲತಾ, ಸಂಜೀವ ಪೂಜಾರಿ ಹಾಗೂ ಪೋಷಕರಾದ ಅಬ್ದುಲ್ ಬಷೀರ್ ಮತ್ತು ಸಾರಮ್ಮ, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಬಾಲಕೃಷ್ಣ ಎನ್. ವಿ. ಧನ್ಯವಾದವಿತ್ತರು.

ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Leave a Reply

Your email address will not be published. Required fields are marked *