Breaking
13 May 2026, Wed

ಪ್ರಿಯತಮೆಯ ಮೇಲೆ ಹಲ್ಲೆ ಮಾಡಿ ನೇಣಿಗೆ ಶರಣಾದ ಯುವಕ

ಬಂಟ್ವಾಳ: ಪ್ರೇಮಿಯೊಬ್ಬ ಪ್ರಿಯತಮೆಯ ಮೇಲೆ ಹಲ್ಲೆ ಮಾಡಿ ಆ ಬಳಿಕ ನೇಣಿಗೆ ಶರಣಾದ ಘಟನೆ ತಾಲೂಕಿನ ದೈಯಡ್ಕ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಡ್ಮಾನ್ ಕಾಂಜೀರ ಕೋಡಿ ನಿವಾಸಿ (36) ವರ್ಷದ ಸುಧೀರ್ ಎಂದು ಗುರುತಿಸಲಾಗಿದೆ.

(26) ವರ್ಷದ ಯುವತಿ ದಿವ್ಯ ಎಂಬಾಕೆ ಗಂಭೀರ ಸ್ಥಿತಿಯಲ್ಲಿ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇವರಿಬ್ಬರು ಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಯಾವುದೋ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ದಿವ್ಯ ಮೇಲೆ ಮನಬಂದಂತೆ ಥಳಿಸಿದ್ದು ಯುವತಿ ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಗಾಯಾಳು ದಿವ್ಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು.ಇತ್ತ ಯುವಕ ಸುಧೀರ್ ಈ ಹಿಂದೆ ಕೂಡ ಟವರ್ ಹತ್ತಿ ಈಕೆಯನ್ನು ಹೆದರಿಸಿದ್ದ ಅನ್ನುವ ಮಾಹಿತಿ ಇದೆ. ಸದ್ಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *