Breaking
13 May 2026, Wed

ಪುತ್ತೂರಿನಲ್ಲಿ ಪಾದಚಾರಿ ಮೇಲ್ವೇತುವೆಗೆ ಹಾಲಿನ ವಾಹನ ಡಿಕ್ಕಿ: ಚಾಲಕ ಅಪಾಯದಿಂದ ಪಾರು

ಪುತ್ತೂರು: ಹಾಲಿನ ವಾಹನವೊಂದು ಪಾದಚಾರಿ ಮೇಲ್ವೇತುವೆಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಸುದಾನ ವಸತಿಯುತ ಶಾಲೆಯ ಮುಂಭಾಗದಲ್ಲಿ ಸೋಮವಾರ ಸಂಜೆಯ ವೇಳೆ ನಡೆದಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಹಾಲಿನ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *