Breaking
19 Sep 2026, Sat

ಅಬ್ದುಲ್ ರಹ್ಮಾನ್ ಮತ್ತು ಅಶ್ರಫ್ ಕೊಲೆ ಪ್ರಕರಣದ ಆರೋಪಿಗಳ ಬಂಧನ ವಿಳಂಬ: ಬಿ.ಸಿ ರೋಡ್‌ನ ಕೈಕಂಬದಲ್ಲಿ ಎಸ್‌ಡಿಪಿ ಐ ನಿಂದ ಪ್ರತಿಭಟನೆ

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ನಿವಾಸಿ ಅಬ್ದುಲ್ ರಹ್ಮಾನ್ ಮತ್ತು ಮಂಗಳೂರು ನಗರದ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಯಲ್ಲಿ ಸಾವನ್ನಪ್ಪಿದ ಕೇರಳ ವಯನಾಡ್ ನ ಅಶ್ರಫ್ ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ವಿಳಂಬವನ್ನು ಖಂಡಿಸಿ ಬಿ,ಸಿ ರೋಡ್ ನ ಕೈಕಂಬ ಬಳಿ ಎಸ್‌ಡಿಪಿಐ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.

ಈ ವೇಳೆ ಪ್ರತಿಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ನವಾಜ್ ಷರೀಫ್ ಕಟ್ಟೆ ಅವರು ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆಗೆ ನ್ಯಾಯ ಸಿಗುವ ವರೆಗೆ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸಮಿತಿ ಸದಸ್ಯ ಅಥವುಲ್ ಜೋಗಟ್ಟೆ ಮಾತನಾಡಿ ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆಯನ್ನು ಖಂಡಿಸಿ ಮುಂಬರುವ ದಿನಗಳಲ್ಲಿ ನ್ಯಾಯ ಸಿಗದೇ ಇದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದರು.

ಇದೇ ವೇಳೆ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಬಂಧನ ವಿಳಂಬವನ್ನು ಖಂಡಿಸಿ ರಾಜ್ಯ ಸರಕಾರ ಹಾಗೂ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಎಸ್‌ಡಿಐನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ನಾಶ ಗ್ಯಾರಂಟಿ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ನಾಯಕರಾದ ಅಸೆಂಬ್ಲಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ, ಜಿಲ್ಲಾ ಉಪಾಧ್ಯಕ್ಷ ಮೊಹನೀಶ್ ಅಲಿ, ನಗರ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಗಟ್ಟೆ, ಕ್ಷೇತ್ರ ಸಮಿತಿ ಅಧ್ಯಕ್ಷ ಸಾಹುಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *