ಸಿದ್ದಕಟ್ಟೆ: ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ – 25 ಸ್ಯಾಚೆಟ್‌ ಮದ್ಯ ವಶಕ್ಕೆ

ಬಂಟ್ವಾಳ : ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಅಜ್ಜಿಬಾಕಿಮಾರ್ ಪ್ರದೇಶದ ಅಂಗಡಿಯೊಂದರಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಸುಮಾರು 1,250 ರೂ. ಮೌಲ್ಯದ 2.25 ಲೀಟರ್‌ ಮದ್ಯ ಹೊಂದಿದ್ದ ಒಟ್ಟು 25 ಮದ್ಯ ಸ್ಯಾಚೆಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಂಗಡಿಯ ಮಾಲಕಿ ಸುಜಾತಾ ಶೆಟ್ಟಿ ವಿರುದ್ಧ ಅಕ್ರಮ ಮದ್ಯ ಸಂಗ್ರಹಣೆ ಹಾಗೂ ಮಾರಾಟ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *