ಕಟೀಲು: ಕೆಲಸಕ್ಕೆಂದು ಹೋದ ವ್ಯಕ್ತಿ ಮರಳಿ ಬಾರದೆ ನಾಪತ್ತೆ

ಮಂಗಳೂರು: ಬೆಳಗ್ಗೆ ಬಜಪೆಗೆ ಕೆಲಸಕ್ಕೆಂದು ಹೋದವರು ಮರಳಿ ಬಾರದೆ ನಾಪತ್ತೆಯಾದ ಘಟನೆ ಜು. 4ರಂದು ಕಟೀಲು ಕೊಂಡೆಮೂಲ ನರ್ತಿಕಲ್ಲುಎಂಬಲ್ಲಿ ನಡೆದಿದೆ .

ನಾಪತ್ತೆಯಾದವರು ನರ್ತಿಕಲ್ಲು ನಿವಾಸಿ ವಿಶ್ವನಾಥ (56) ಎಂದು ಗುರುತಿಸಲಾಗಿದೆ.

ವಿಶ್ವನಾಥ ಬೆಳಗ್ಗೆ 8:30ಕ್ಕೆ ಮನೆಯಿಂದ ಕೆಲಸಕ್ಕೆoದು ತೆರಳಿದ್ದರು. ಮಧ್ಯಾಹ್ನ 2 ಗಂಟೆಗೆ ಪತ್ನಿ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ನಂತರ ಎಲ್ಲಾ ಕಡೆ ಹುಡುಕಾಟ ನಡೆಸಿದರು ಪತ್ತೆಯಾಗಿರಲಿಲ್ಲ.

ಇವರು ಸುಮಾರು 5 ಅಡಿ ಎತ್ತರ, ಗೋಧಿ ಮೈ ಬಣ್ಣದವರಾಗಿದ್ದು, ತುಳು ಭಾಷೆ ಬಲ್ಲವರಾಗಿದ್ದಾರೆ. ಮನೆಯಿಂದ ಹೊರಡುವಾಗ ಬಿಳಿ ಬಣ್ಣದ ಅರ್ಧ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದರು.

ಈ ಗುರುತಿನ ವ್ಯಕ್ತಿಯ ಮಾಹಿತಿ ಸಿಕ್ಕಿದಲ್ಲಿ ಬಜಪೆ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *