ರಾಜಸ್ಥಾನ: ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡು ಪೈಲಟ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚುರು ಜಿಲ್ಲೆಯ ರತನ್‌ಗಢ ಪಟ್ಟಣದಲ್ಲಿ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.


ವಿಮಾನದ ಅವಶೇಷಗಳು ಪೈಲಟ್ ದೇಹದ ಜೊತೆಗೆ ಹೊಲವೊಂದರಲ್ಲಿ ಪತ್ತೆಯಾಗಿದ್ದು, ಮೃತದೇಹ ತೀವ್ರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ಕಂಡು ಬಂದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಪೈಲಟ್ ಮತ್ತು ಇನ್ನೊಬ್ಬ ವ್ಯಕ್ತಿಯ ಗುರುತುಗಳನ್ನು ಸೇನೆ ಮತ್ತು ಸ್ಥಳೀಯ ಆಡಳಿತವು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.
ಅಪಘಾತದಿಂದಾಗಿ ಹತ್ತಿರದ ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಪ್ರಯತ್ನಿಸಿದ್ದೇವೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಜಾಮ್‌ನಗರದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಸುವರ್ದಾ ಗ್ರಾಮದ ಬಳಿ ತರಬೇತಿ ಕಾರ್ಯಾಚರಣೆ ನಡೆಸುತ್ತಿದ್ದ ಜಾಗ್ವಾರ್ ವಿಮಾನ ಈ ಹಿಂದೆ ಪತನಗೊಂಡಿತ್ತು. ಕಳೆದ 3 ತಿಂಗಳಲ್ಲಿ ನಡೆದ ಎರಡನೇ ವಿಮಾನ ಅಪಘಾತ ಇದಾಗಿದೆ.


