ಮಂಗಳೂರು: ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಉತ್ತರ ಭಾರತದ ಮೂವರು ಆರೋಪಿಗಳನ್ನು ಸೆನ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ 32 ವರ್ಷದ ಮಾಯಾರಾಮ್, ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಚೋಪ್ಡಾದ 48 ವರ್ಷದ ಪ್ರೇಮಸಿಂಗ್ ರಾಮ್ ಪವಾರ್ ಮತ್ತು 35 ವರ್ಷದ ಅನಿಲ್ ಪ್ರಕಾಶ್ ಕೋಲಿ ಎಂದು ಗುರುತಿಸಲಾಗಿದೆ. ಅವರಿಂದ ಮೂರು ಮೊಬೈಲ್‌ಫೋನ್‌ಗಳು ಹಾಗೂ ₹1,78,920 ನಗದು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದ 6 ಜನರನ್ನು ಪತ್ತೆ ಮಾಡಿ ಜುಲೈ 2 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಮಂಗಳೂರಿಗೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ದೃಢಪಟ್ಟಿದೇ. ತನಿಖೆ ಮುಂದುವರಿದಿದ್ದು, ಇನ್ನುಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.



