Breaking
19 Sep 2026, Sat

ಉಳ್ಳಾಲ : ರಕ್ತದೊತ್ತಡದಿಂದ ಕುಸಿದು ಬಿದ್ದು ನವ ವಿವಾಯಿತ ಸಾವು

ಉಳ್ಳಾಲ : ರಕ್ತದೊತ್ತಡದಿಂದ ವ್ಯಕ್ತಿಯೊರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜು.9ರಂದು ನಡೆದಿದೆ.

ಮೃತಪಟ್ಟವರು ಉಳ್ಳಾಲ ತಾಲೂಕಿನ ಮಂಜನಾಡಿ ನ ಭರತ್ (32) ಎಂದು ಗುರುತಿಸಲಾಗಿದೆ.

ಎಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು, ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ನಗರದ ಮಾಲೊಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಮೃತರು ತಾಯಿ ಹಾಗೂ ಮೂವರು ಸೋದರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *