ದ್ವೇಷ ಭಾಷಣ ಮಾಡುವವರನ್ನು ಪೊಲೀಸರು ಎತ್ತಾಕೊಂಡು ಹೋಗಿ ಕ್ರಮ ಕೈ ಗೊಳ್ಳಬೇಕು: ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋದನಕಾರಿ ಭಾಷಣ ಮಾಡುತ್ತಾರೆ, ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಬುಧವಾರ ಮಂಗಳೂರಿನ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಶಾಂತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಜನ ಶಾಂತಿ ಪ್ರಿಯರು 5% ಇರುವ ಸಮಾಜ ಘಾತುಕ ವ್ಯಕ್ತಿಗಳು ಇಂಥಹ ಕೃತ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ, ಇಂಥಹ ಕಿಡಿಗೇಡಿಗಳಿಗೆ ಕೆಲವು ರಾಜಕೀಯ ವ್ಯಕ್ತಿಗಳು ಬೆಂಬಲವನ್ನು ನೀಡುತ್ತಿದ್ದಾರೆ.

ಈ ಕನಿಷ್ಟ ಸಂಖ್ಯೆಯಲ್ಲಿರುವವರನ್ನು ಸದೆಬಡಿಯುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕು. ಈಗ ಹೊಸದಾಗಿ ಬಂದಿರುವ ಕಮಿಷನರ್,ಎಸ್ಪಿಯವರು ಈಗ ಸಮರ್ಪಕವಾಗಿ ಅದನ್ನು ನಿಭಾಯಿಸುತ್ತಿದ್ದಾರೆ ಎಂದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಈ ಶಾಂತಿ ಸಭಾಧ್ಯಕ್ಷತೆ ವಹಿಸಿದ್ದರು.

Leave a Reply

Your email address will not be published. Required fields are marked *