ಮುಲ್ಕಿ: ಮಾರಕಾಯುಧಗಳನ್ನು ಹಿಡಿದುಕೊಂಡು ದರೋಡೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿ ಕಳೆದ 8 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಲ್ಕಿ ಠಾಣೆಯ ಪೊಲೀಸರು ಚಿಕ್ಕಮಗಳೂರಿನ ತರಿಕೆರೆಯಲ್ಲಿ ಬಂಧಿಸಿದ್ದಾರೆ.

ರವಿ ನಾಯಕ್ ಬಂಧಿತ ಆರೋಪಿಯಾಗಿದ್ದಾನೆ.

ಸದ್ಯ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ರವಿ ನಾಯಕ್ ವಿರುದ್ಧ ಸಕಲೇಶಪುರ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.




