ಕೊಯಮತ್ತೂರಿನ ಬಾಂಬ್ ಬ್ಲಾಸ್ಟ್ ಆರೋಪಿ ವಿಜಯಪುರದಲ್ಲಿ ಬಂಧನ

ತಮಿಳುನಾಡು: 1998ರ ಕೊಯಮತ್ತೂರಿನಲ್ಲಿ ನಡೆದಿದ್ದ ಬಾಂಬ್ ಬ್ಲಾಸ್ಟ್ ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪಿಯನ್ನು ಕೊಯಮತ್ತೂರು ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ಸಿದ್ದಿಕಿ ರಾಜ್ ಬಂಧಿತ ಆರೋಪಿ.

ಈತ ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿ ತಮಿಳುನಾಡಿನಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಾಲ್ಗೊಂಡಿದ್ದ ಈತ ಘಟನೆ ನಡೆದ ಬಳಿಕ ತಮಿಳುನಾಡಿನಿಂದ ಜಾಗ ಖಾಲಿ ಮಾಡಿ 27 ವರ್ಷಗಳಿಂದ ತಲೆ ಮರೆಸಿಕೊಂಡು ಜೀವನ ನಡೆಸುತ್ತಿದ್ದ. ಬಳಿಕ ಬೇರೆ ಬೇರೆ ಸ್ಥಳಗಳಲ್ಲಿ ಅಡಗಿದ್ದ ಸಿದ್ದಿಕಿ ರಾಜ್ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದ ಎನ್ನಲಾಗಿದೆ.

    ಇದೀಗ ಆರೋಪಿಯನ್ನು ಪತ್ತೆ ಮಾಡಿರುವ ಕೊಯಮತ್ತೂರು ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

    Leave a Reply

    Your email address will not be published. Required fields are marked *