Breaking
25 Mar 2026, Wed

ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ

ನವದೆಹಲಿ: ಆಕ್ಸಿಯಮ್ -4 ಮಿಷನ್‌ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳು ಜುಲೈ 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಲಿದ್ದಾರೆ.

‘ಆ್ಯಕ್ಸಿಯಮ್-4′ ಯೋಜನೆಯ ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ಡ್ರಾಗನ್‌ ಬಾಹ್ಯಾಕಾಶ ಕೋಶವನ್ನು ಐಎಸ್‌ಎಸ್‌ನಿಂದ ಅನ್‌ಡಾಕ್ (ಬೇರ್ಪಡಿಸುವುದು) ಮಾಡಬೇಕಿದೆ. ಆ ಪ್ರಕ್ರಿಯೆಗೆ ಜುಲೈ 14ರ ದಿನಾಂಕ ನಿಗದಿಪಡಿಸಿದ್ದೇವೆ’ ಎಂದು ನಾಸಾ ಅಧಿಕಾರಿ ಸ್ಟೀವ್ ಸ್ವಿಚ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *