ಬ್ರಹ್ಮಾವರದ ವಾರಂಬಳ್ಳಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವ ಅರೆಸ್ಟ್

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.

ಬಂಧಿತ ವ್ಯಕ್ತಿಯನ್ನು ಕುಂದಾಪುರ ಮೂಲದ ಹಂದಾಡಿಯ 49 ವರ್ಷದ ಉಮೇಶ ಪೂಜಾರಿ ಎಂದು ಗುರುತಿಸಲಾಗಿದೆ.

ಈತ ಇಲ್ಲಿನ ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ನ ಟೂರಿಸ್ಟ್ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸ್ಕೂಟರ್ ಮೇಲೆ ಮದ್ಯದ ಚೀಲವನ್ನು ಇಟ್ಟುಕೊಂಡು ಯಾವುದೇ ಪರವಾನಗಿ ಇಲ್ಲದೆ ಹೆಚ್ಚಿನ ಬೆಲೆಗೆ ಮದ್ಯವನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯಿಂದ 30 ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ ವಶಪಡಿಸಿಕೊಂಡಿದ್ದು, ಅದರ ಒಟ್ಟು ಅಂದಾಜು ಮೌಲ್ಯ ಸುಮಾರು ರೂ.1,700 ಹಾಗೂ ಆತನ ಬಳಿಯಿದ್ದ ಮದ್ಯ ಮಾರಾಟದಿಂದ ಬಂದ ಹಣ ರೂ 280 ಮತ್ತು ಮದ್ಯ ಮಾರಾಟ ಮಾಡಲು ಉಪಯೋಗಿಸಿದ ಸ್ಕೂಟರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Leave a Reply

Your email address will not be published. Required fields are marked *