ಕಣಿಯೂರು: ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮ

ಕಣಿಯೂರು: ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ಪರಮ ಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಪಾದ ಪೂಜೆ ಮತ್ತು ಗುರು ವಂದನಾ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಳಿಕೆ ಉಪಸ್ಥಿತರಿದ್ದರು.

ಟ್ರಸ್ಟ್ ನ ಕಾರ್ಯದರ್ಶಿ ಚಂದ್ರಶೇಖರ ಕಣಿಯೂರು, ಟ್ರಸ್ಟಿಗಳು, ಮಾತೃ ಮಂಡಳಿಯ ಸದಸ್ಯರು, ಯುವ ಸೇವಾ ಸಂಘದ ಸದಸ್ಯರು ಹಾಗೂ ನೂರಾರು ಭಗವದ್ಭಕ್ತರು ಭಾಗವಹಿಸಿ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

Leave a Reply

Your email address will not be published. Required fields are marked *