ಕಿನ್ನಿಗೋಳಿ: ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿರುವ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಕಿನ್ನಿಗೋಳಿಯ ಉದ್ಯಮಿ ಪಿಂಟೋ ಗಾರ್ಡನ್ ಮಾಲೀಕ ರೋಕಿ ಪಿಂಟೋ(68) ಎಂದು ಗುರುತಿಸಲಾಗಿದ್ದು ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರೋಕಿ ಪಿಂಟೋ ಅವರು ಕಳೆದ ಎರಡು ತಿಂಗಳಿಂದ ತನ್ನ ಫಾರ್ಚುನರ್ ಕಾರಿನಲ್ಲಿ ಬಾಲಕಿಯನ್ನು ಶಾಲೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಬಾಲಕಿಗೆ ವಾಟ್ಸಪ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದಲ್ಲದೆ, ಕಾರಿನಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾರೆ.

ಬಾಲಕಿಯ ತಾಯಿ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿಯ ಫಾರ್ಚುನರ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿ ರೋಕಿ ಪಿಂಟೋ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಕಾರಣ ಅವರನ್ನು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.



