Breaking
20 Sep 2026, Sun

ಅಕ್ರಮ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ: ಏಳು ಮಂದಿ ಸಹಿತ , ನಗದು ಹಾಗೂ ವಾಹನ ವಶಕ್ಕೆ

ಮೂಡುಬಿದ್ರೆ : ತಾಲೂಕಿನ ಇರುವೈಲ್ ಗ್ರಾಮದ ಕೋರಿಬೆಟ್ಟು ಬಳಿ ಅಕ್ರಮ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅಕ್ಬರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ್ ಎಂದು ಗುರುತಿಸಲಾಗಿದೆ. ದಾಳಿ ಸಂದರ್ಭದಲ್ಲೂ ಹಲವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಧಿತರಿಂದ 10,100 ರೂ. ನಗದು, ಎರಡು ದ್ವಿಚಕ್ರ ವಾಹನಗಳನ್ನು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *