ಬಂಟ್ವಾಳ: ತಾಲೂಕಿನಲ್ಲಿ ಕೆಂಪು ಕಲ್ಲು ಮತ್ತು ಮರಳು ಸಿಗದೆ ಕಟ್ಟಡ ಕಾರ್ಮಿಕರು, ಜನಸಾಮಾನ್ಯರು ಹೈರಾಣಾಗಿದ್ದು ಈ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ಖಂಡಿಸಿ ಇಂದು (ಜು.14) ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಬಿಸಿ ರೋಡ್ ನಲ್ಲಿ ಪ್ರತಿಭಟನೆ ನಡೆಯಿತು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ , ಮಾಧವ ಮಾವ, ವಿಕಾಸ್ ಪುತ್ತೂರು , ಸುಲೋಚನಾ ಭಟ್ ರವರು ಕಾಂಗ್ರೆಸ್ ಸರಕಾರದ ವೈಫಲ್ಯದ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮರಳು ಮತ್ತು ಕೆಂಪು ಕಲ್ಲುಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಆಗ್ರಹದ ಮನವಿಯನ್ನು ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ , ದಿನೇಶ್ ಅಮ್ಟೂರು, ರಾಮದಾಸ್ ಬಂಟ್ವಾಳ, ಪ್ರಭಾಕರ ಪ್ರಭು, ಕಟ್ಟಡ ಕಾರ್ಮಿಕರು ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.





