Breaking
19 Sep 2026, Sat

ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸಿ ಸೇತುವೆ ಉದ್ಘಾಟಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ ಜೋಶಿ

ಶಿವಮೊಗ್ಗ: ಸಿಗಂದೂರು ಸೇತುವೆಯನ್ನ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ ಜೋಶಿ ಅವರು ನೂತನ ಸೇತುವೆಯನ್ನು ಉದ್ಘಾಟಿಸಿದರು.

ಸುಮಾರು 12 ಗಂಟೆ 20 ನಿಮಿಷಕ್ಕೆ ಸೇತುವೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಬಂದ ಕೇಂದ್ರ ಸಚಿವರು ಮೊದಲು ಉದ್ಘಾಟನಾ ಕಲ್ಲುಗಳನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು, ನಂತರ ಗಣಪತಿ ಹೋಮ ಹಾಗೂ ದೇವಿ ಪೂಜೆಯಲ್ಲಿ ತೊಡಗಿ ಆರತಿ ಬೆಳಗಿದರು. ನಂತರ ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಸೇತುವೆ ಉದ್ಘಾಟನೆಯನ್ನು ಅಧಿಕೃತಗೊಳಿಸಿದರು. ಮಾಜಿ ಸಿಎಂ ಬಿಎಸ್ ವೈ ಸಹ ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸಿ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ.ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಸಂಸದರು, ಎಂಎಲ್ ಸಿ ಡಾ.ಧನಂಜಯ್ ಸರ್ಜಿ.ಮಾಜಿ ಸಚಿವ ಹರತಾಳು ಹಾಲಪ್ಪ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *