Breaking
19 Sep 2026, Sat

ಕಾರು ಸ್ಕೂಟರಿಗೆ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ: ಇನ್ನೋವಾ ಕಾರು ಸ್ಕೂಟರಿಗೆ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ತಿಲ ಗ್ರಾಮದ ದಾಸಕೋಡಿಯಲ್ಲಿ ಜುಲೈ 14ರಂದು ನಡೆದಿದೆ.

ಗಾಯಗೊಂಡಿರುವವರನ್ನು ಪುತ್ತೂರು ಪಟ್ಟೂರು ನಿವಾಸಿ ವೈ.ಎಸ್.ತೇಜಸ್ ಹಾಗೂ ಸಹಸವಾರ ಗೌತಮ್ ಎಂದು ಗುರುತಿಸಲಾಗಿದೆ.
ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚಾಲಕ ಕೆ.ಜಗದೀಶ ನಾಯ್ಕ ಇನ್ನೋವಾ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *