ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡಿರುವವರನ್ನು ಕಣ್ಣೂರು ಇರಿಕ್ಕೂರು ನಿವಾಸಿಗಳಾದ ಅಬ್ದುಲ್ ನಾಸರ್, ನುಸ್ರತ್, ಅಯೂಬ್, ಜಾಫರ್ ಎಂದು ಗುರುತಿಸಲಾಗಿದ್ದು ಅವರನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಅಬ್ದುಲ್ ನಾಸರ್ ಅವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿದ್ದವರು ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಈ ಕುರಿತು ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



