Breaking
25 Mar 2026, Wed

ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿಬಿದ್ದು ಮೂವರು ನಾಪತ್ತೆ

ಕುಂದಾಪುರ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದು, ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಗಂಗೊಳ್ಳಿ ಬಂದರಿನಲ್ಲಿ ಇಂದು ನಡೆದಿದೆ.

ನಾಪತ್ತೆಯಾಗಿರುವವರನ್ನು ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ರೋಹಿತ್ ಖಾರ್ವಿ ಎಂದು ಗುರುತಿಸಲಾಗಿದೆ. ಜೊತೆಯಲ್ಲಿ ಇದ್ದ ಸಂತೋಷ್ ಖಾರ್ವಿಯನ್ನು ಬೇರೊಂದು ದೋಣಿಯ ಮೀನುಗಾರರು ರಕ್ಷಿಸಿದ್ದಾರೆ ಎನ್ನಲಾಗಿದೆ.

ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಸಮುದ್ರಕ್ಕೆ ತೆರಳಿದ್ದ ವೇಳೆ, ದೋಣಿ ಅಲೆಗಳ ಅಬ್ಬರಕ್ಕೆ ಮಗುಚಿಬಿದ್ದು ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕರಾವಳಿ ಕಾವಲು ಪಡೆ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *