Breaking
19 Sep 2026, Sat

ಉಡುಪಿ: ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಎಂಜಿಎಂ ಸಮೀಪ ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಇಂದು (ಜು.15) ಬೆಳಗ್ಗೆ ನಡೆದಿದೆ.

ಮಣಿಪಾಲದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಉಡುಪಿಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಮತ್ತೊಂದು ಖಾಸಗಿ ಬಸ್ ಪರಸ್ಪರ ಢಿಕ್ಕಿಯಾಗಿ ಈ ಅಪಘಾತದ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳೀಯ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ಪರಿಣಾಮವಾಗಿ ಕೆಲ ಹೊತ್ತಿನೊಳಗೆ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಗಿ, ಸಾರ್ವಜನಿಕರು ಹಾಗೂ ಪೊಲೀಸರು ದಟ್ಟಣೆ ನಿಯಂತ್ರಣಕ್ಕೆ ಯತ್ನಿಸಿದರು.

Leave a Reply

Your email address will not be published. Required fields are marked *