Breaking
15 Jul 2026, Wed

ಪುತ್ತೂರಿನಲ್ಲಿ ತಲವಾರು ಹಿಡಿದು ಬೆದರಿಸುತ್ತಿದ್ದ ವ್ಯಕ್ತಿ ಪೊಲೀಸ್‌ ವಶಕ್ಕೆ

ಪುತ್ತೂರು: ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಜುಲೈ 14 ರಂದು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ಕಸ್ಬಾ ಗ್ರಾಮದ ಬೊಳುವಾರು ಎಂಬಲ್ಲಿ ನಡೆದಿದೆ.

ವ್ಯಕ್ತಿಯನ್ನು ಹಾಸನ ನಿವಾಸಿ ರಾಜು (45) ಎಂದು ಗುರುತಿಸಲಾಗಿದ್ದು, ಈತ ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುತ್ತಿದ್ದಾನೆ ಎಂದು ತಿಳಿದುಬಂದಿದೆ.

ರಾಜು ತಲವಾರನ್ನು ಹಿಡಿದು ಜನರನ್ನು ಬೆದರಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕ್ಕಿದ್ದು, ಈ ಹಿನ್ನೆಲೆ ಪುತ್ತೂರು ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯ ನಿವಾಸಿಗಳ ಸಹಾಯದಿಂದ ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *