ಮೂಡುಬಿದಿರೆ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ- ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡು, ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡುತ್ತಿದ್ದ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದು, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಬಳಿಕ ಜೀವಶಾಸ್ತ್ರ ಉಪನ್ಯಾಸಕ, ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವೀಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್ಮೇಲ್ ಮಾಡಿದ್ದ, ಸಂದೀಪ್ ಅತ್ಯಾಚಾರ ಎಸಗಿದ ರೂಮ್ನಲ್ಲಿ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾದಾಗ ಪೋಷಕರ ಬಳಿ ಹೇಳಿಕೊಂಡಿದ್ದಾಳೆ.ಬಳಿಕ ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ನೀಡಿದ್ದು ,ಸದ್ಯ ಮೂವರು ಆರೋಪಿಗಳನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *