ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಕುಂಜತ್ತೂರು ಎಂಬಲ್ಲಿ ಲಾರಿ ಬಡಿದು ಇಬ್ಬರು ಕಾರ್ಮಿಕರು ಮೃತಪಟ್ಟು , ಓರ್ವ ಗಂಭೀರ ಗಾಯಗೊಂಡ ಘಟನೆ ಜುಲೈ 15 ರ ಸಂಜೆ ನಡೆದಿದೆ.
ಮೃತಪಟ್ಟವರನ್ನು ಬಿಹಾರ ಮೂಲದ ರಾಜ್ ಕುಮಾರ್ ಮಾಥೂರ್ ಹಾಗೂ ರಾಜಸ್ಥಾನದ (23) ದಾಮೋರ್ ಅಮಿತ್ ಗಣಪತಿ ಬಾಯ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಓರ್ವ ಕಾರ್ಮಿಕನನ್ನು ಮಂಗಳೂರಿನ ಆಸ್ಫತ್ರೆಗೆ ದಾಖಲಿಸಲಾಗಿದೆ.

ಕೇರಳದ ಮಣ್ಣಾರ್ಕಾಡ್‌ನಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಹೆದ್ದಾರಿ ಬದಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹರಿದಿದೆ. ಲಾರಿ ಅತಿವೇಗದಿಂದ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಕಾಮಗಾರಿಯ ಗುತ್ತಿಗೆ ಪಡೆದ ಕಂಪೆನಿಯ ಕಾರ್ಮಿಕರು ರಾಷ್ಟೀಯ ಹೆದ್ದಾರಿಯಲ್ಲಿ ಕೆಲಸ ನಿರ್ಹಿಸುತ್ತಿದಾಗ ಈ ದುರ್ಘಟನೆ ನಡೆದಿದೆ. ಲಾರಿ ಚಾಲಕನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.




