Breaking
13 May 2026, Wed

ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿದ ಯೆಮೆನ್

ಯೆಮೆನ್: ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯ ದಿನಾಂಕವನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ.

2017ರಲ್ಲಿ ನರ್ಸ್ ನಿಮಿಷಾ ಪ್ರಿಯಾ ತನ್ನ ವ್ಯವಹಾರ ಪಾಲುದಾರ ತಲಾಲ್ ಅಬ್ದೋ ಮಹ್ದಿಯನ್ನು ಕೊಲೆಗೈದಿರುವ ಆರೋಪದ ಮೇಲೆ ಯೆಮೆನ್ ಜೈಲಿನಲ್ಲಿದ್ದು ಅದರಂತೆ ಜು.16ರಂದು ಮರಣದಂಡನೆ ನಿಗದಿಯಾಗಿತ್ತು. ಇದರ ಬೆನ್ನಲ್ಲೇ ರಾಜತಾಂತ್ರಿಕವಾಗಿ ಹಾಗೂ ಧಾರ್ಮಿಕ ಮುಖಂಡರ ಸಮ್ಮುಖದಲ್ಲಿ ಮಹ್ದಿ ಕುಟುಂಬದೊಂದಿಗೆ ಮಾತುಕತೆ ನಡೆಸಿ ನರ್ಸ್ ನಿಮಿಷಾ ಪ್ರಿಯಾಳನ್ನು ರಕ್ಷಿಸುವ ಪ್ರಯತ್ನಗಳು ನಡೆದಿತ್ತು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *