ಉಡುಪಿ: ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದಿದೆ.

ಈ ನಿಟ್ಟಿನಲ್ಲಿ ಜು. 18 ರ ವರೆಗೆ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಹಾಗೂ ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು.
ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಯನ್ನು ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.




