ಹಾಸನ: ಸಕಾ೯ರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

ಹಾಸನ: ಸಕಲೇಶಪುರ ತಾಲ್ಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಸಕಾ೯ರಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮೂಡಿಗೆರೆಗೆ ತೆರಳುತ್ತಿದ್ದ ಬಸ್‌ ಮತ್ತು ಸಕಲೇಶಪುರಕ್ಕೆ ತೆರಳುತ್ತಿದ್ದ ಬಸ್‌ ಮಧ್ಯೆ ಇಂದು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು ಈ ವೇಳೆ ಶಾಲಾ-ಕಾಲೇಜು ಮಕ್ಕಳು ಸೇರಿದಂತೆ ಹಲವು ಪ್ರಯಾಣಿಕರು ಬಸ್ಸಿನಲ್ಲಿದ್ದರು. ತಿರುವಿನಲ್ಲಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *