Breaking
13 May 2026, Wed

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ– ಇಬ್ಬರು ಆರೋಪಿಗಳಿಗೆ ಜಾಮೀನು ನಿರಾಕರಣೆ

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಜಾಮೀನುಗಾಗಿ ತುಂಬೆ ನಿವಾಸಿ ಅಭಿನ್ ರೈ ಮತ್ತು ಶೃಂಗೇರಿ ನಿವಾಸಿ ರವಿ ಸಂಜಯ್ ಅವರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಹೀಗಾಗಿ ಇಬ್ಬರೂ ಆರೋಪಿಗಳು ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣದ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈಗಾಗಲೇ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ತಲೆಮರೆಸಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *